Recent Posts

Friday, November 22, 2024
ಕಾಪುಸುದ್ದಿ

ಕಿಂಡಿ ಅಣೆಕಟ್ಟಿಗೆ ತಹಶಿಲ್ದಾರ್ ಪ್ರತಿಭಾ ಭೇಟಿ : ನೆರೆ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಕಹಳೆ ನ್ಯೂಸ್

ಪ್ರತಿವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಫಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ಗ್ರಾಮದ ಪುಂಜಮಾರು ಹಾಗೂ ಪಲಿಮಾರು ಗ್ರಾಮದ ಕಿಂಡಿ ಅಣೆಕಟ್ಟು ಪ್ರದೇಶ ಮೂಡುಪಲಿಮಾರು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರತಿವರ್ಷ ನೆರೆ ಭೀತಿ ಇದ್ದೇ ಇರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಣ್ಣ ನೀರಾವರಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ರವರಿಗೆ ಫಲಿಮಾರು ಕಿಂಡಿ ಅಣೆಕಟ್ಟಿನ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿರುತ್ತಾರೆ.

ಫಲಿಮಾರು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಆಸಿಪಾಸಿನ ತೋಡುಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲು ಸಲಹೆ ನೀಡಿರುತ್ತಾರೆ.

ಅಲ್ಲಿನ ಆಸುಪಾಸಿನ ಮನೆಗಳಿಗೆ ಭೇಟಿ ನೀಡಿ ಮಾನ್ಯ ತಹಶಿಲ್ದಾರ್ ಪ್ರತಿಭಾ ಪರಿಶೀಲನೆ ನಡೆಸಿ ಅಲ್ಲಿನ ಮನೆಗಳವರಿಗೆ ನೆರೆ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದಾರೆ. “ನಾವಿದ್ದೇವೆ ನಿಮ್ಮ ಜೊತೆಗೆ” ಎಂಬ ಭರವಸೆ ನೀಡಿದ್ದಾರೆ.

ತಹಶಿಲ್ದಾರ್ ಪ್ರತಿಭಾ ಆರ್ ರವರು ಕಾಪು ತಾಲ್ಲೂಕನ್ನು ಮುಂಗಾರು ಸುರಕ್ಷತಾ ತಾಲ್ಲೂಕಾಗಿ ಮಾಡಲು ಪಣ ತೊಟ್ಟಿದ್ದಾರೆ. ತಾಲ್ಲೂಕಿನಾದ್ಯಂತ ಸಂಚರಿಸಿ ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುತ್ತಿದ್ದಾರೆ. ಕಡಲ್ಕೊರೆತ, ತೋಡುಗಳ ಸ್ವಚ್ಚತೆ, ಚರಂಡಿಗಳ ಸ್ವಚ್ಚತೆ, ಸೇತುವೆಗಳ ಸುರಕ್ಷತೆ ಇತ್ಯಾದಿಗಳ ಬಗ್ಗೆ ಗಮನಿಸುತ್ತಿದ್ದಾರೆ. ತಾಲ್ಲೂಕಿನ ಜನತೆಗೆ “ನಾವಿದ್ದೇವೆ ನಿಮ್ಮೊಂದಿಗೆ… ನಿರಾತಂಕವಾಗಿರಿ” ಎಂಬ ಸಂದೇಶ ನೀಡುತ್ತಿದ್ದಾರೆ.

ತಾಲ್ಲೂಕು ಆಡಳಿತ ನೆರೆ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿದೆ. ಬೋಟುಗಳನ್ನು ರೆಡಿ ಇಟ್ಟುಕೊಳ್ಳಲಾಗಿದೆ. ನುರಿತ ಈಜುಗಾರರ ತಂಡ ಸದಾ ಸೇವೆಗೆ ಲಭ್ಯವಿದೆ. ತಹಶಿಲ್ದಾರ್ ಕಚೇರಿ ಕಂಟ್ರೋಲ್ ರೂಮ್ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದೆ (0820-2551444).
ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಕರೆ ಮಾಡಿ ಸಹಾಯ ಪಡೆಯಬಹುದು.