Recent Posts

Tuesday, January 21, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದಿ| ಪ್ರವೀಣ್ ನೆಟ್ಟಾರು ಸ್ಮರಣಾರ್ಥ ನೆಟ್ಟಾರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ದಿವಂಗತ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಎಸ್.ಎಲ್.ವಿ.ಬುಕ್ ಹೌಸ್ ಇವರ ಸಹಕಾರದೊಂದಿಗೆ ನೆಟ್ಟಾರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವನಾಥ ಪೆಲತ್ತಮೂಲೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಯಂ ನಿವೃತ್ತ ಕಸ್ಟಮ್ ಅಧಿಕಾರಿ ಆರ್, ಕೆ ಭಟ್ ಕುರುಂಬುಡೇಲು, ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಪ್ರಿಯಾ ಆರ್ ಆಚಾರ್, ಅಕ್ಷಯ ಯುವಕ ಮಂಡಲ ನೆಟ್ಟಾರು ಇದರ ಅಧ್ಯಕ್ಷ ಪದ್ಮನಾಭ ಕೋಡಿಬೈಲು, ಶೀನಪ್ಪ ಪೂಜಾರಿ ಕುತ್ಯಾಡಿ ಹಾಗು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ವಸಂತ್ ಗೌಡ ನೆಟ್ಟಾರು ನಿರೂಪಿಸಿ, ನೆಟ್ಟಾರು ದ.ಕ.ಜಿ.ಪಂ.ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ನಳಿನಾಕ್ಷಿ ಸ್ವಾಗತಿಸಿದರು. ದಿ| ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿ ನೂತನ ಪ್ರವೀಣ್ ಧನ್ಯವಾದ ಸಮರ್ಪಿಸಿದರು.