Recent Posts

Saturday, September 21, 2024
ಕಾಪುಸುದ್ದಿ

ನಂದಿಕೂರು M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ– ಕಹಳೆ ನ್ಯೂಸ್

M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದರು.

M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಮತ್ತು ಸ್ಥಳೀಯವಾಗಿ ಉಂಟಾಗುತ್ತಿರುವ ಮಾಲಿನ್ಯದ ಸಮಸ್ಯೆ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಸ್ಥಳೀಯ ಮನವಿಯಂತೆ ಇಂದು ಸ್ಥಳಕ್ಕೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯರಿಗೆ ಪ್ರಥಮ ಆದ್ಯತೆಯಲ್ಲಿ ಉದ್ಯೋಗ ನೀಡಬೇಕು ಮತ್ತು ಕಂಪನಿಯ ಆಸುಪಾಸಿನ ಮನೆಗಳ ಬಾವಿ ನೀರು ಕಲುಷಿತವಾಗುತ್ತಿದ್ದು ಈ ಬಗ್ಗೆ 15 ದಿನಗಳ ಒಳಗಾಗಿ ಸಮಸ್ಯೆಗಳನ್ನು ಪರಿಹರಿಸುವಂತೆ ಶಾಸಕರು ಸೂಚಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ, ಕಾಪು ತಹಶೀಲ್ದಾರರಾದ ಪ್ರತೀಭಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್ ನಾಯಕ್, ಕಾರ್ಮಿಕ ಇಲಾಖೆಯ ಕುಮಾರ್, ಪೊಲ್ಲ್ಯೂಷನ್ ಬೋರ್ಡ್ ಡಿ.ಪಿ ಮಹೇಂದ್ರ, ಅಮೃತ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಉಪಸ್ಥಿತರಿದ್ದರು.