Sunday, November 24, 2024
ಉಡುಪಿಸುದ್ದಿ

ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ –ಕಹಳೆ ನ್ಯೂಸ್

ಉಡುಪಿ : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಕಾರ್ಯಕ್ರಮ ಇಂದು ದಿನಾಂಕ 20-06-2024 ರಂದು ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಸಕರು ಮಾತನಾಡಿ ಸಾರ್ವಜನಿಕರಿಗಾಗಿ ಸರಕಾರ ಅನೇಕ ವಿಮಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿಯ ಕೊರತೆ ಇದೆ. ಪ್ರತಿ ಗ್ರಾಮಗಳಲ್ಲಿ ಇಂತಹ ಶಿಬಿರಗಳನ್ನು ಹಮ್ಮಿಕೊಂಡಾಗ ಇದರಿಂದ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ ಅವರು ಅಂಚೆ ಇಲಾಖೆ ಜಾರಿಗೆ ತಂದಿರುವ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮಾಡಿಸಿ ಸಾರ್ವಜನಿಕರು ಇರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ್ ಭಟ್, ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಕಾರ್ಯದರ್ಶಿಗಳಾದ ಪ್ರಸಾದ್ ಭಂಡಾರಿ, ಇಂಡಿಯನ್ ಪೋಸ್ಟ್ ಬ್ಯಾಂಕ್ ಅಧಿಕಾರಿಗಳಾದ ಸ್ಮಿತಾ, ದಯಾನಂದ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು