ತಿರುವನಂತಪುರಂ: ಶಬರಿಮಲೆ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರು ಪ್ರವೇಶಿಸಲು ಅನುವು ಮಾಡಿಕೊಟ್ಟಿರುವ ಸುಪ್ರೀಂಕೋರ್ಟ್ ತೀರ್ಪಿನ ಪರ ಹಾಗೂ ವಿರುದ್ಧವಾಗಿ ಪ್ರತಿಭಟನೆ ನಡೆಯುತ್ತಿರುವ ಮಧ್ಯೆಯೇ, ಮುಂದಿನ ತಿಂಗಳು ಮಂದಿರ ತೆರೆಯುವ ವೇಳೆ ಶಬರಿಮಲೆಗೆ ಭೇಟಿ ನೀಡುವ ಅಪೇಕ್ಷೆಯನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವ್ಯಕ್ತಪಡಿಸಿರುವುದು ವಿವಾದದ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಮುಂದಿನ ತಿಂಗಳು ದೇಗುಲಕ್ಕೆ ಭೇಟಿ ನೀಡಲು ಅಮಿತ್ ಶಾ ನಿರ್ಧರಿಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖಂಡರೊಬ್ಬರು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪಿ.ಎಸ್. ಶ್ರೀಧರನ್ ಪಿಳ್ಳೈ ಈಗಾಗಲೇ ನವೆಂಬರ್ 8 ರಿಂದ ರಥಯಾತ್ರೆ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಇನ್ನೂ ಎಲ್ಲ ವಯೋಮಾನದ ಮಹಿಳೆಯರ ಭೇಟಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಕಾಸರಗೋಡಿನಿಂದ ಶಬರಿಮಲೆಗೆ ಈ ಯಾತ್ರೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.