ಮಕ್ಕಳ ಸುರಕ್ಷತಾ ನಿಯಮಗಳ ಬಗ್ಗೆ ಕ್ರಮವಹಿಸಿದಿದ್ದರೆ, ಯಾವುದೇ ಅನಾಹುತ ನಡೆದಾಗ ಆಯಾ ಖಾಸಗಿ ಶಾಲಾ ಆಡಳಿತ ಮಂಡಳಿಯನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಸುರಕ್ಷತಾ ನಿಯಮಗಳ ಬಗ್ಗೆ ಸರ್ಕಾರ ಸೂಚಿಸಿರುವ ನಿಯಮಗಳನ್ನು ಶಾಲಾ ಆಡಳಿತ ಮಂಡಳಿ ಪಾಲಿಸಬೇಕು.
ಈ ಹಿಂದೆ ವರ್ತೂರಿನ ವಿಬ್‌ಗಯಾರ್ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಬಳಿಕ ಸರ್ಕಾರ ಖಾಸಗಿ ಶಾಲೆಗಳು ಕೆಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿತ್ತು.
ಆದರೆ ಯಾವುದೇ ರೀತಿಯಲ್ಲಿ ಖಾಸಗೀ ಶಾಲೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಅವರು ಈ ಸಂದರ್ಭ ಹೇಳಿದ್ದಾರೆ.