ಕುಂದಾಪುರ : ಕುಂದಾಪುರ ಪುರಸಭೆಯ ಒಳಚರಂಡಿ ಯೋಜನೆಯ ಕಾಮಗಾರಿ ಹಾಗೂ ಪಟ್ಟಣದಲ್ಲಿ ನೀರು ಸರಬರಾಜು ಮಾಡುವ ನಿವಾರಣೆಯ ಕುರಿತು ಹಾಗೂ ಪುರಸಭೆಯ ಕಾಮಗಾರಿ ಪ್ರಗತಿ ಪರಿಶೀಲನೇಯ ಸಭೆ-ಕಹಳೆ ನ್ಯೂಸ್
ಕುಂದಾಪುರ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿಯವರ ಉಪಸ್ಥಿತಿಯಲ್ಲಿ ಪುರಸಭೆಯ ಒಳಚರಂಡಿ ಯೋಜನೆ ಕಾಮಗಾರಿ ಹಾಗೂ ಪಟ್ಟಣದಲ್ಲಿ ಕುಡಿಯುವ ನೀರಿನ ಬಗ್ಗೆ ಚರ್ಚೆ ಮಾಡಲಾಯಿತು.
ಪುರಸಭಾ ವ್ಯಾಪ್ತಿಯ ಮುಖ್ಯರಸ್ತೆಗಳಲ್ಲಿ ನೀರು ಹರಿಯುವ ಚರಂಡಿಗಳಲ್ಲಿರುವ ಹೂಳುಗಳನ್ನು ತೆರವುಗೂಳಿಸಿ ಸರಾಗವಾಗಿ ಹರಿಯುವಂತೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು, ಹಾಗೇ ಪುರಸಭೆಗೆ ಆಗಮಿಸುವ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡುವಂತೆ ಶಾಸಕರು ಸೂಚಿಸಿದರು.