Saturday, November 23, 2024
ಕುಂದಾಪುರಸುದ್ದಿ

ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ನಡೆದ ಬೃಹತ್ ಪ್ರತಿಭಟನೆ –ಕಹಳೆ ನ್ಯೂಸ್

ಕುಂದಾಪುರ: ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ ಸಂಪನ್ಮೂಲ ಹೊಂದಾಣಿಕೆಗೆ ಮಾಡಿದ ತೈಲಬೆಲೆ ಏರಿಕೆ ಸಮಸ್ಯೆ, ಬಿಜೆಪಿಯವರಿಗೆμÉ್ಟೀ ಅಲ್ಲ ರಾಜ್ಯದ ಅಷ್ಟೂ ಜನರಿಗೆ. ಅದ್ದರಿಂದ ಎಲ್ಲರ ಪರವಾಗಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು.

ಅವರು ಶಾಸ್ತ್ರಿ ಸರ್ಕಲ್ ನಲ್ಲಿ ಕುಂದಾಪುರ ತಾಲೂಕು ಬಿಜೆಪಿ ವತಿಯಿಂದ ನಡೆದ ತೈಲಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ತೈಲಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ ಬೆಲೆಯೂ ಏರಲಿದೆ. ಜನಸಾಮಾನ್ಯರ ಬದುಕು ದುರ್ಬರವಾಗಲಿದೆ ಕಾಂಗ್ರೆಸ್ ಸರ್ಕಾರ ಬಡವರ ಎಂದು ಹೇಳುತ್ತಿದ್ದರು ಪರೋಕ್ಷವಾಗಿ ಬಡವರ ಲೂಟಿಯಾಗುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ.ಬಿಜೆಪಿ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ದ.ಕ. ಜಿಲ್ಲಾ ಬಿಜೆಪಿ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು,ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಇವರ ನೇತೃತ್ವದಲ್ಲಿ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು