Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಚಿತ ಆರೋಗ್ಯ ತಪಾಸಣಾ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ –ಕಹಳೆ ನ್ಯೂಸ್

ಸುರತ್ಕಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಡುಬೆಳ್ಳೆ ಒಕ್ಕೂಟ, ಗೆಳೆಯರ ಬಳಗ (ರಿ.) ಪಡುಬೆಳ್ಳೆ, ನವಚೇತನ ಮಹಿಳಾ ಮಂಡಲ (ರಿ.) ಪಡುಬೆಳ್ಳೆ ಹಾಗೂ ಶ್ರೀನಿವಾಸ ಆಸ್ಪತ್ರೆ ಮುಕ್ತ ಸುರತ್ಕಲ್ ಮಂಗಳೂರು ಇವರ ಆಶ್ರಯದಲ್ಲಿ  ಪಡುಬೆಳ್ಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ “ಉಚಿತ ವೈದ್ಯಕೀಯ ತಪಾಸಣಾ ಶಿಬಿರ”ದ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ, ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ಶ್ರೀ ನಿವಾಸ ಆಸ್ಪತ್ರೆಯ ಡಾ. ಶಶಿರಾಜ್ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಮತಿ, ಕೃಷಿ ಅಧಿಕಾರಿ ದೇವೇಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು