Saturday, January 25, 2025
ಉಡುಪಿಸುದ್ದಿ

ಬೆಳ್ಮಣ್: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕಿ‌ ಮೃತ್ಯು – ಕಹಳೆ ನ್ಯೂಸ್

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ. ಪ್ರಣಮ್ಯ ಅವರು ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯಕ್ಕೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಅವರು‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಣಮ್ಯ ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ‌ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು