Recent Posts

Sunday, January 19, 2025
ಸುದ್ದಿ

ದುನಿಯಾ ವಿಜಿ ಮೊದಲ ಪತ್ನಿ ನಾಪತ್ತೆ: ಖಡಕ್ ವಾರ್ನಿಂಗ್ ಕೊಟ್ಟ ಡಿಸಿಪಿ ಅಣ್ಣಾಮಲೈ – ಕಹಳೆ ನ್ಯೂಸ್

ಬೆಂಗಳೂರು : ದುನಿಯಾ ವಿಜಿ ಮೊದಲ ಪತ್ನಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ನಾಗರತ್ನಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಾಗರತ್ನ ದುನಿಯಾ ವಿಜಿ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಮಾಡಿದ ಸಿಸಿಟಿವಿ ದೃಶ್ಯಗಳು ಬಿಡುಗಡೆಯಾದ ದಿನದಿಂದ ನಾಪತ್ತೆಯಾಗಿದ್ದಾರೆ. ಹೀಗಾಗಿ ಒಂದು ವಾರದ ಒಳಗೆ ಉತ್ತರ ನೀಡಬೇಕೆಂದು ಸೂಚನೆ ನೀಡಿದ್ದೇವೆ ಎಂದು ಡಿಸಿಪಿ ಅಣ್ಣಾಮಲೈ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾಗರತ್ನ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಗಿರಿನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಾಗರತ್ನ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾನು ಈಗಾಗಲೇ ನಾಗರತ್ನ ಅವರಿಗೆ ಎಚ್ಚರಿಕೆ ನೀಡಿದ್ದೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು