Recent Posts

Sunday, January 19, 2025
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ – ಕಹಳೆ ನ್ಯೂಸ್

ಉಡುಪಿ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಒರಿಸ್ಸಾ ಮೂಲದ ಇಬ್ಬರನ್ನು ಉಡುಪಿ ಪೊಲೀಸರು ಸಂತೆಕಟ್ಟೆ ಬಳಿ ಸೋಮವಾರ ಸಂಜೆ ವೇಳೆ ಬಂಧಿಸಿದ್ದಾರೆ. ಬಂಧಿತರಿಂದ 25 ಸಾವಿರ ಮೌಲ್ಯದ ಒಂದು ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಒರಿಸ್ಸಾ ಮೂಲದ ಪ್ರಸ್ತುತ ಪುತ್ತೂರು ಸುಬ್ರಹ್ಮಣ್ಯ ನಗರದ ಬಾಡಿಗೆ ಮನೆ ನಿವಾಸಿ ದೇವಶಿಸ್ ಶೇಥಿ(27), ಹಾಗೂ ಸಂತೆಕಟ್ಟೆ ಬಾಡಿಗೆ ಮನೆ ನಿವಾಸಿ ಸನಾತನ್ ಪಾತ್ರ(32) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳು ಒರಿಸ್ಸಾದಿಂದ ಗಾಂಜಾವನ್ನು ತಂದು ಇಲ್ಲಿ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು