Recent Posts

Sunday, January 19, 2025
ಸುದ್ದಿ

ರಸ್ತೆ ಅಪಘಾತ ಮಾಡಿದ್ದಕ್ಕೆ ನ್ಯಾಯಾಲಯದಿಂದ ನೋಟಿಸ್, ಆಟೋ ಚಾಲಕ ಆತ್ಮಹತ್ಯೆ – ಕಹಳೆ ನ್ಯೂಸ್

ಚಾಮರಾಜನಗರ: ರಸ್ತೆ ಅಪಘಾತ ಮಾಡಿದ್ದಕ್ಕೆ ನ್ಯಾಯಾಲಯದಿಂದ ನೋಟಿಸ್ ಬಂದಿದ್ದರಿಂದ ಭಯಗೊಂಡ ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ನಡೆದಿದೆ.

ಗೂಳಿಪುರ ಗ್ರಾಮದ ನಿವಾಸಿ, ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ(26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಈತ ಕಳೆದ ಒಂದೂವರೆ ವರ್ಷಗಳ ಹಿಂದೆ ಹುರಳಿನಂಜನಪುರ ಬಳಿ ಮಾಡಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗವಂತೆ ನೋಟಿಸ್ ಬಂದಿತ್ತು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಆತ ಮನೆಯಿಂದ ಹೊರಗೆ ಹೋಗಿದ್ದಾನೆ. ಮನೆಯಲ್ಲಿದ್ದವರು ಬರಬಹುದೆಂದು ಸುಮ್ಮನಾಗಿದ್ದಾರೆ. ಆದರೆ ಮಹೇಶ ಮನೆಯಿಂದ ಹೊರಗೆ ಹೋದವನು ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ ಮನೆಯಿಂದ ಊಟ ಮಾಡಿಕೊಂಡು ಹೊರಗಡೆ ಹೋದವನು ಮನೆಗೆ ಬರಲಿಲ್ಲ ಎಂಬುದು ಗೊತ್ತಾದರೂ ಮನೆಯವರು ಬೇರೆ ಕಡೆ ಮಲಗಿರಬೇಕೆಂದು ತಿಳಿದು ಸುಮ್ಮನಾಗಿದ್ದರು. ಆದರೆ ಬೆಳಗ್ಗೆ ಎದ್ದು ನೋಡಿದರೆ ಗ್ರಾಮದ ಹೊರ ವಲಯದ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ನ್ಯಾಯಾಲಯದಿಂದ ಬಂದ ಸಮನ್ಸ್ ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಚಾಮರಾಜನಗರ ತಾಲೂಕಿನ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ವಾರಸುದಾರರಿಗೆ ನೀಡಲಾಗಿದೆ.