Tuesday, April 8, 2025
ಉಡುಪಿಸುದ್ದಿ

ಹೆಬ್ರಿ : ಬೈಕ್‌ ಗೆ ಕಾರು ಡಿಕ್ಕಿ : ಬೈಕ್‌ ಸವಾರ ಮೃತ್ಯು – ಕಹಳೆ ನ್ಯೂಸ್

ಹೆಬ್ರಿ : ಬೈಕ್‌ ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ. ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ.

ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ ಸೇತುವೆಯಿಂದ ಸ್ವಲ್ಪ ಮುಂದೆ ತಲುಪುವಾಗ ಅಜೆಕಾರು ಕಡೆಯಿಂದ ಹೆಬ್ರಿ ಕಡೆಗೆ ಸಾಗುತ್ತಿದ್ದ ಆಲ್ಡೊ ಕಾರು ಡಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಣಾಮವಾಗಿ ಸವರಾರಿಬ್ಬರು ರಸ್ತೆಗೆ ಬಿದ್ದು, ಗಾಯಗೊಂಡಿದ್ದರು. ವಿಶ್ವನಾಥ ಅವರು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದು, ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲಿ ವೈದ್ಯರು ಪರೀಕ್ಷಿಸಿ ವಿಶ್ವನಾಥ ಅವರು ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತ್ರೇಸಿಯಮ್ಮ ಎಂಬವರೂ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ