Sunday, January 19, 2025
ದೆಹಲಿಸುದ್ದಿ

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ-ಕಹಳೆ ನ್ಯೂಸ್

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ ಹೆಸರನ್ನು ಪ್ರಸ್ತಾಪಿಸಿ, ಅನುಮೋದಿಸಿದರು. ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್‌ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಲಭಿಸಿತು. ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ, ಸಚಿವ ಕಿರಣ್ ರಿಜಿಜು ಹಾಗೂ ರಾಹುಲ್ ಗಾಂಧಿ ಅವರು ನೂತನ ಸ್ಪೀಕರ್‌ ಅವರನ್ನು ಪೀಠಕ್ಕೆ ಕರೆತಂದರು.