Sunday, January 19, 2025
ಉಡುಪಿಶಿಕ್ಷಣಸುದ್ದಿ

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗೆ ತೃತೀಯ ಸ್ಥಾನ-ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ದೇರೆಬೈಲು ವಾಸುದೇವ ತಂತ್ರಿ ಇವರಿಗೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಛಂದ್ ಗೆಹ್ಲೋಟವರು ಬೆಂಗಳೂರಿನ ರಾಜಭವನದಲ್ಲಿ ಸನ್ಮಾನಿಸಿದರು.

ಮಾರ್ಚ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಶಾಸ್ತ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವು ವಿಜಯವೈಜಯಂತಿ ಪುರಸ್ಕಾರವನ್ನು ಪಡೆದಿತ್ತು. ಕರ್ನಾಟಕದ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಆಗಿರುವ ಶ್ರೀಮತಿ ಅಹಲ್ಯಾ ಶರ್ಮಾ ಇವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು