Sunday, January 19, 2025
ಕಾಪುಸುದ್ದಿ

ಕಾಪು ಹೊಸ ಮಾರಿಗುಡಿ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ -ಕಹಳೆ ನ್ಯೂಸ್

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ ನೀಡಲಾಯಿತು.

ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ಸ್ವರ್ಣ ಗೌರಿ ಪೂಜೆಯೊಂದಿಗೆ ಸ್ವರ್ಣ ಸಮರ್ಪಣೆಗೆ ಚಾಲನೆ ದೊರಕಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ತಹಶೀಲ್ದಾರ್ ಡಾ. ಪ್ರತಿಭಾ ಆರ್. ಸಹಿತ ನೂರಾರು ಮಂದಿ ಗಣ್ಯರು, ಮಹಿಳೆಯರು ಸ್ವರ್ಣ ಗೌರಿ ಪೂಜೆಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು‌. ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಂಬಯಿ ವಿ.ಕೆ. ಗ್ರೂಪ್ ಆಫ್ ಕಂಪನೀಸ್ ಆಡಳಿತ ನಿರ್ದೇಶಕ ಕೆ. ಎಂ‌. ಶೆಟ್ಟಿ ಸ್ವರ್ಣ ಗದ್ದುಗೆಯ ಮಾದರಿ ಅನಾವರಣಗೊಳಿಸಿದರು.