Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಪ್ರಕರಣ: ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ – ಕಹಳೆ ನ್ಯೂಸ್

ಮಂಗಳೂರು: ನಗರದ ಹೊರ ವಲಯದ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಇಂದು ಮುಂಜಾನೆ ಒಂದೇ ಕುಟುಂಬದ ನಾಲ್ವರು ಗೋಡೆ ಕುಸಿದು ಸಾವನ್ನಪ್ಪಿದ್ದು, ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಯುಟಿ ಖಾದರ್ ಅವರು ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದಷ್ಟು ಬೇಗ ಪರಿಹಾರ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ತುರ್ತು ಸ್ಪಂದಿಸುವಂತೆ ತಿಳಿಸಿದ್ದು, ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ.

ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ ಮೀನುಗಾರರು, ನದಿ ಪಾತ್ರದ ಜನರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರ ವಹಿಸುವಂತೆ ವಿನಂತಿಸುತ್ತೇನೆ.

ಪ್ರಾಕೃತಿಕ ವಿಕೋಪದ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿರುತ್ತೇನೆ.