Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಳ್ಳಾಲ : ಭಾರಿ ಮಳೆಗೆ ಮನೆ ಮೇಲೆ ಕಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು : ಮಡಿದವರ ಆತ್ಮಕ್ಕೆ ಸದ್ದತಿ ಕೋರಿದ ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ತುರ್ತು ಸ್ಪಂದಿಸುವಂತೆ ತಿಳಿಸಿದ್ದು, ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ ಮೀನುಗಾರರು, ನದಿ ಪಾತ್ರದ ಜನರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರ ವಹಿಸುವಂತೆ ವಿನಂತಿಸುತ್ತೇನೆ.

ಪ್ರಾಕೃತಿಕ ವಿಕೋಪದ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿರುತ್ತೇನೆ.