Wednesday, February 12, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ತಡರಾತ್ರಿ ಸುರಿದ ಭಾರೀ ಮಳೆಗೆ ಮನೆ ಮೇಲೆ ಕುಸಿದು ಬಿದ್ದ ಧರೆ : ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು ! – ಕಹಳೆ ನ್ಯೂಸ್

ಪುತ್ತೂರು: ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.

ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು ಮನೆಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು. ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್ ಸಹಿತ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು