Saturday, January 25, 2025
ಉಡುಪಿಸುದ್ದಿ

ಜುಲೈ 1ರಂದು ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮಣಿಪಾಲ ಎಂಐಸಿ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್ ಇದರ ಪ್ರೋಫೆಸರ್ ಆಫ್ ಪ್ರಾಕ್ಟಿಸ್ ಸತ್ಯಬೋಧ ಜೋಶಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ ‘ಪೊಲೀಸ್ ತನಿಖೆಯಲ್ಲಿ ಮಾಧ್ಯಮಗಳ ಪಾತ್ರ’ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯ ಅತಿಥಿಗಳಾಗಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ, ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿರುವರು. ಉಡುಪಿ ಉಜ್ವಲ್ ಗ್ರೂಪ್‌ನ ಆಡಳಿತ ನಿರ್ದೇಶಕ ಅಜಯ್ ಪಿ.ಶೆಟ್ಟಿ ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಮಂಜುನಾಥ ಶೆಣೈ ಜನ್ನಾಡಿ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ಸಲ್ಲಿಸಲಾಗುವುದು. ಅದೇ ರೀತಿ ಉದಯವಾಣಿ ಪತ್ರಿಕೆಯಲ್ಲಿ 29ವರ್ಷಗಳ ಕಾಲ ಉಪಸಂಪಾದಕರಾಗಿ ದುಡಿದು ನಿವೃತ್ತರಾದ ಹಿರಿಯ ಪತ್ರಕರ್ತ ಜಯಾನಂದ ಅವರನ್ನು ಸನ್ಮಾನಿಸ ಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ