Recent Posts

Monday, January 27, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೊಸ್ಮಾರಿನ ಮನೆಯ ಅಂಗಳ ಮುಂಭಾಗದ ತಡೆಗೋಡೆ ಕುಸಿತ : ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ ಪುರಸಭಾ ವ್ಯಾಪ್ತಿಯ ಹೊಸ್ಮಾರಿನಲ್ಲಿ ಮನೆಯ ಅಂಗಳ ಮುಂಭಾಗದ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರ್ಧ ಭಾಗದ ತಡೆಗೋಡೆ ಕುಸಿದಿದ್ದು, ಉಳಿದ ಅರ್ಧ ಭಾಗದ ತಡೆಗೋಡೆ ಕುಸಿದು ಬೀಳವ ಹಂತದಲ್ಲಿದೆ. ಘಟನೆಯಿಂದ ಮನೆಯ ಅಂಗಳ ಬಹುತೇಕ ಕುಸಿದಿದ್ದು, ಮನೆ ಅಪಾಯಕ್ಕೆ ಸಿಲುಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲೇ ಸಮೀಪದ ದೈವ ಗುಡ್ಡೆ ಎಂಬಲ್ಲಿ ಅವರಣಗೋಡೆ ಕುಸಿದು ಎರಡು ಮನೆಗಳಿಗೆ ಹಾನಿಯಾಗುವ ಸಂಭವಿದೆ, ಅಲ್ಲಿನ ಪರಿಸ್ಥಿತಿಯನ್ನು ಶಾಸಕರು ಬೇಟಿ ನೀಡಿ ಅವಲೋಕನ ನಡೆಸಿದರು. ಪ್ರಾಥಮಿಕ ಹಂತದಲ್ಲಿ ಏನೆಲ್ಲಾ ಕ್ರಮಗಳನ್ನು ‌ಕೈಗೊಳ್ಳಬಹುದು, ಮತ್ತು ಸಮಸ್ಯೆಯಿಂದ ಸಿಲುಕಿಕೊಂಡ ಮನೆಗಳಿಗೆ ತಾತ್ಕಾಲಿಕವಾಗಿ ಪರಿಹಾರ ಕಾರ್ಯಕೈಗೊಂಡು ಸರಕಾರದಿಂದ ಸಿಗುವ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವದಾಸ್ ಶೆಟ್ಟಿ, ರಾಮ್ ದಾಸ್ ಬಂಟ್ವಾಳ, ಪುರಸಭಾ ಸದಸ್ಯ ಗಂಗಾಧರ ಪೂಜಾರಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್ ಮತ್ತಿತರರು ಹಾಜರಿದ್ದರು.