ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜಯಂತಿ ಕಾರ್ಯಕ್ರಮಕ್ಕೆ ವೀಕ್ಷಕರು ಬದಲಾಗಬೇಕಿದ್ದು, ಇಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೆ ಮುಟ್ಟಿಸುವ ಕಾರ್ಯ ನಡೆಯಬೇಕು. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗದೆ ಸರ್ವರಿಗೂ ಆದರ್ಶರಾಗಬೇಕು ಎಂದರು.
ತಹಶೀಲ್ದಾರ್ ಅರ್ಚನಾ ಭಟ್ ಮಾತನಾಡಿ, ಕೆಂಪೇಗೌಡರ ಕೆರೆ ನಿರ್ವಹಣೆಯ ಸಾಧನೆಯು ವಿಶೇಷವಾಗಿದ್ದು, ಜತೆಗೆ ಅಭಿವೃದ್ಧಿಗೂ ವಿಶೇಷ ಆದ್ಯತೆ ನೀಡಿದ್ದರು ಎಂದರು. ನಿವೃತ್ತ ಶಿಕ್ಷಕ ಲಿಂಗಪ್ಪ ಗೌಡ ಉಪನ್ಯಾಸ ನೀಡಿದರು. ಕೃಷಿಕ ಕೆ.ಚಂದ್ರಶೇಖರ ಅವರನ್ನು ಸನ್ಮಾನಿಸಲಾಯಿತು. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಬಂಟ್ವಾಳ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಮೋನಪ್ಪ ಗೌಡ, ಬಂಟ್ವಾಳ ತಾ.ಪಂ.ಆಡಳಿತಾಽಕಾರಿ ಮಂಜುನಾಥ, ಇಒ ಮಹೇಶ್ ಹೊಳ್ಳ, ಬಿಇಒ ಮಂಜುನಾಥನ್ ಉಪಸ್ಥಿತರಿದ್ದರು. ಉಪತಹಶೀಲ್ದಾರ್ ನವೀನ್‌ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.