Recent Posts

Sunday, January 19, 2025
ದೆಹಲಿಸುದ್ದಿ

ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ: ಕ್ಯಾಪ್ಟನ್ ಬ್ರಿಜೇಶ್ ಚೌಟ– ಕಹಳೆ ನ್ಯೂಸ್

ನವದೆಹಲಿಯಲ್ಲಿ‌ ನಡೆಯುತ್ತಿರುವ ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ‌ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡಕ್ಕೆ‌ ಸಂಬಂಧಿಸಿದ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿ ಸ್ವಾಧೀನ ಪಡಿಸಿಕೊಂಡ ಜೆಬಿಎಫ್ ಕಂಪೆನಿಯ ಉದ್ಯೋಗಿಗಳನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಚಿವರಲ್ಲಿ ಒತ್ತಾಯಿಸಲಾಯಿತು ಎಂದು ಹೇಳಿದರು.