ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಅದರಲ್ಲೂ ಈವರೆಗೆ ಯಾವುದೇ ವಿಶ್ವಕಪ್ ಗೆಲ್ಲದಿರುವ ಸೌತ್ ಆಫ್ರಿಕಾ ತಂಡವು ಚೊಚ್ಚಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ.
ಮತ್ತೊಂದೆಡೆ 2007ರ ಬಳಿಕ ಟಿ20 ವಿಶ್ವಕಪ್ ಗೆಲ್ಲದ ಭಾರತ ತಂಡವು 10 ವರ್ಷಗಳ ಬಳಿಕ ಚುಟುಕು ಕ್ರಿಕೆಟ್ ಮಹಾಸಮರದಲ್ಲಿ ಫೈನಲ್ಗೆ ಪ್ರವೇಶಿಸಿದೆ.
ಟಿ20 ವಿಶ್ವಕಪ್ ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಜೂನ್.29) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಏಕೆಂದರೆ ಉಭಯ ತಂಡಗಳು ಈ ಬಾರಿಯ ವಿಶ್ವಕಪ್ ನಲ್ಲಿ ಸೋಲಿಲ್ಲದ ಸರದಾರರಾಗಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಟೀಮ್ ಇಂಡಿಯಾ ಆಡಿರುವ 7 ಪಂದ್ಯಗಳಲ್ಲೂ ವಿಜಯ ಸಾಧಿಸಿದರೆ, ಅತ್ತ ಸೌತ್ ಆಫ್ರಿಕಾ 8 ಮ್ಯಾಚ್ಗಳನ್ನು ಗೆದ್ದು ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಹೀಗಾಗಿ ಫೈನಲ್ ನಲ್ಲಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ.