Recent Posts

Friday, November 22, 2024
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪರಿಸರಕ್ಕೆ ಬದ್ಧತೆ ನಮ್ಮ ಆದ್ಯತೆ’–ಕೆನರಾ ಇಂಟರ್‌ನ್ಯಾಷನಲ್ ಶಾಲಾ ವಿದ್ಯಾರ್ಥಿಗಳಿಂದ ಘೋಷಣೆ –ಕಹಳೆ ನ್ಯೂಸ್

ಮಂಗಳೂರು: ಹಸಿರು ಬೆಳೆಸಿ ಭೂಮಿ ಉಳಿಸಿ’, ‘ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ’ ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ ಕ್ಷಣವಿದು. ಪರಿಸರ ಕಾಳಜಿಯ ಘೋಷಣೆಗಳನ್ನು ಕೂಗಿದ ಮಕ್ಕಳು ಎಲ್ಲರ ಗಮನವನ್ನು ಸೆಳೆದರು.
ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ನಿರ್ದೇಶಕಿ ಶ್ರೀಮತಿ ಅಂಜನಾ ಕಾಮತ್ ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ, ಮಕ್ಕಳು ಆವರಣದಲ್ಲಿ ಸುತ್ತಾಡುತ್ತಾ ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಸಾರಿದರು. ಈ ಕಾರ್ಯಕ್ರಮದ ಮೂಲಕ ಪರಿಸರದ ಮೇಲೆ ಪ್ಲಾಸ್ಟಿಕ್ ಮಾಡುತ್ತಿರುವ ಹಾನಿಯನ್ನು ತಪ್ಪಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದರು. ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸುವ ಮೂಲಕ ಭೂಮಿಯನ್ನು ಉಳಿಸಬೇಕೆಂಬ ಸಂದೇಶವನ್ನು ಸಾರಿದರು.

ಇಂತಹ ಯೋಜನಾಬದ್ಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೀತಿಯನ್ನು ಬೆಳೆಸಲು ಅತ್ಯಂತ ಅಗತ್ಯವಿದ್ದು ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತು ಕೊಳ್ಳುವ ಕಾರ್ಯಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಪ್ರೇರೇಪಿಸುವ ಕೆನರಾ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳ ಪರಿಸರದ ಮೇಲಿನ ಬದ್ಧತೆಯನ್ನು ಶ್ಲಾಘಿಸಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು