Sunday, January 19, 2025
ಮುಂಬೈಸುದ್ದಿ

ಜಲಪಾತದಲ್ಲಿ ಈಜಾಡುವ ವೇಳೆ ಜಾರಿ ಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು – ಕಹಳೆ ನ್ಯೂಸ್

ಮುಂಬೈ: ಪಿಕ್ನಿಕ್ ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.


ಪಿಕ್ನಿಕ್‍ಗೆ ಬಂದಿದ್ದ ಒಂದೇ ಕುಟುಂಬದ ಐವರು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರು ಸಾವನ್ನಪ್ಪಿದ್ದಾರೆ. ಇನ್ನು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು