Monday, January 20, 2025
ಸುದ್ದಿ

ಮರಳು ಸಮಸ್ಯೆ ; ನವೆಂಬರ್ 10 ರಂದು ಉಡುಪಿ ಬಂದ್’ಗೆ ಕರೆ ನೀಡಿದ ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ,ಅ 31 : ಉಡುಪಿ ಜಿಲ್ಲೆಯಲ್ಲಿನ ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ನವೆಂಬರ್ 10 ರಂದು ಉಡುಪಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮರಳಿಗಾಗಿ ಹೋರಾಟ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಮುಂಭಾಗ ಹಗಲು-ರಾತ್ರಿ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಪತ್ರಕರ್ತ ಪ್ರಶ್ನೆಗೆ ಉತ್ತರಿಸಿದ ಅವರು, ನ. 8 ರಂದು ಜಿಲ್ಲೆಯಲ್ಲಿ ನೀತಿಸಂಹಿತೆ ಮುಕ್ತಾಯಗೊಳ್ಳಲಿದ್ದು. ಆ ಬಳಿಕ ಅಂದರೆ ನವೆಂಬರ್ 10ರಂದು ಉಡುಪಿ ಜಿಲ್ಲೆಯಾದ್ಯಂತ ಬಂದ್ ಆಚರಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ ಸಿಆರ್‌ಝಡ್‌ ಮತ್ತು ನಾನ್‌ಸಿಆರ್‌ಝಡ್‌ನ‌ ಎಲ್ಲ ದಿಬ್ಬಗಳಲ್ಲಿ ಮರಳುಗಾರಿಕೆ ಆರಂಭಿಸಬೇಕೆಂದು ಆಗ್ರಹಿಸಿ ಮರಳಿಗಾಗಿ ಹೋರಾಟ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಹಗಲು-ರಾತ್ರಿ ಅನಿರ್ದಿಷ್ಟಾವಧಿ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಹೀಗಾಗಿ ಉಡುಪಿ ಬಂದ್ ಗೆ ಕರೆ ನೀಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು