Recent Posts

Sunday, January 19, 2025
ಕಾರ್ಕಳಸುದ್ದಿ

ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ –ಕಹಳೆ ನ್ಯೂಸ್

ಕಾರ್ಕಕಾಳ : ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಅಂ. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೇಟಿಯ ಕಾರ್ಯವೈಖರಿ ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್ ವಿದ್ಯಾರ್ಥಿಗಳಿಗೆ ಕೋರ್ಸ್ ನ ಮಹತ್ವವನ್ನು ನೀಡಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ.ರಾವ್, ಜ್ಞಾನೇಶ್ ಕೋಟ್ಯಾನ್, ಉಮೇಶ್, ಚಂದ್ರಕಾAತ್ , ಉಪನ್ಯಾಸಕಿ ಅಕ್ಷತಾ ಮತ್ತಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು