Sunday, January 19, 2025
ಉಡುಪಿಕಾಪುಸುದ್ದಿ

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ “ತಾಯಿಯ ಹೆಸರಿನಲ್ಲಿ ಒಂದು ಗಿಡ” ನೆಡುವ ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತನ್ನ ತಾಯಿ ಪದ್ಮಾವತಿ ಅವರ ಹೆಸರಿನಲ್ಲಿ ಕಾಪುವಿನ ಕಲ್ಕುಡ ದೈವಸ್ಥಾನದ ಬಳಿ ಯುವಮೋರ್ಚದವರೊಂದಿಗೆ ಸೇರಿ ಗಿಡ ನೆಟ್ಟರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಬಿಜೆಪಿ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸಚಿನ್ ಸುವರ್ಣ, ಅರ್ಜುನ್ ಪ್ರಭು, ಪ್ರದೀಪ್ ಕುಮಾರ್ ಹಾಗೂ ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಧೀರೇಶ್ ಮೂಳೂರು ಕಾಪು ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಕಾಪು ಮಂಡಲದ ಯವಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು