Saturday, September 21, 2024
ಕುಂದಾಪುರಸುದ್ದಿ

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ-ಕಹಳೆ ನ್ಯೂಸ್

ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು.

ಜಾಹೀರಾತು

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ಬಳಿಕ ಗುಜ್ಜಾಡಿ ಪ್ರಭಾಕರ್ ನಾಯಕ್ ರವರರಿಗೆ ಹೂಗುಚ್ಚ ಮತ್ತು ಪುಸ್ತಕವನ್ನು ನೀಡಿ ಸ್ವಾಗತಿಸಿದ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶ ಪ್ರೇಮ, ತ್ಯಾಗ, ಬಲಿದಾನ ಹಾಗೂ ಆದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾದಾಯಕ. ಡಾ! ಮುಖರ್ಜಿ ಅವರ ನಿಸ್ವಾರ್ಥ ಸೇವಾ ಮನೋಭಾವ, ದೂರದರ್ಶಿತ್ವದ ಚಿಂತನೆಗಳು, ಹೋರಾಟಗಳು ಸದಾ ಅನುಕರಣೀಯ. ಮೌಲ್ಯಯುತ ತತ್ವಾದರ್ಶಗಳನ್ನು ನಾಡಿಗೆ ನೀಡಿದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಪ್ರಾತ: ಸ್ಮರಣೀಯರು ಎಂದರು.

ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಉಪನ್ಯಾಸವನ್ನು ನಡೆಸಿ, ‘ಒಂದು ದೇಶದಲ್ಲಿ ಎರಡು ಧ್ವಜ, ಎರಡು ಪ್ರಧಾನಿ, ಎರಡು ಸಂವಿಧಾನ ಇರಲು ಸಾಧ್ಯವಿಲ್ಲ’ ಎಂಬ ತತ್ವವನ್ನು ಪ್ರತಿಪಾದಿಸಿ ಕಾಶ್ಮೀರದ ವಿಮೋಚನೆಗಾಗಿ ಹೋರಾಡಿ ಹುತಾತ್ಮರಾದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶಭಕ್ತಿ, ಸಾಧನೆ, ಹೋರಾಟಗಳು ಮತ್ತು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪರಿ, ತ್ಯಾಗ, ಬಲಿದಾನದ ಯಶೋಗಾಥೆಯನ್ನು ಎಳೆ ಎಳೆಯಾಗಿ ಬಿಡಿಸಿ ಅವರ ಜೀವನಾದರ್ಶಗಳ ಚಿತ್ರಣವನ್ನು ಸಭೆಯ ಮಂದಿಟ್ಟರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರ.ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಅನಿತಾ ಆರ್.ಕೆ., ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್, ಪ್ರ.ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಕುಮಾರದಾಸ್, ಪ್ರ.ಕಾರ್ಯದರ್ಶಿ ಶ್ರೀಧರ್ ಗೌಡ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಉಡುಪಿ ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ಕುಂದಾಪುರ ಮಂಡಲ ಪ್ರ.ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಪ್ರಮುಖರಾದ ಕುತ್ಯಾರು ನವೀನ್ ಶೆಟ್ಟಿ, ರಾಜೇಶ್ ಕಾವೇರಿ, ಶ್ಯಾಮಲಾ ಎಸ್. ಕುಂದರ್, ಸುಮಿತ್ರಾ ಆರ್. ನಾಯಕ್, ಪ್ರಭಾಕರ್ ಪೂಜಾರಿ, ವೀಣಾ ಎಸ್. ಶೆಟ್ಟಿ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ದಾವೂದ್ ಅಬೂಬಕರ್, ರಮ್ಯಾ ಉಪ್ಪೂರು, ಶೈಲ್ಲಾ ಪೃಥ್ವಿರಾಜ್, ನಳಿನಿ ರಾವ್ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.