ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಸಾಯಿಖಾನೆ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಅನುದಾನ ನೀಡಿಕೆ ವಿಚಾರ ಸಂಬಂಧಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು.
ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕಸಾಯಿಖಾನೆ ಅಭಿವೃದ್ಧಿ ಪಡಿಸುವ ಬಗ್ಗೆ ಪಾಲಿಕೆಯಲ್ಲಿ ಯಾವುದೇ ಚರ್ಚೆ ಮಾಡದೆ ನೇರವಾಗಿ ಸ್ಮಾರ್ಟ್ ಸಿಟಿ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಇರುವುದರ ವಿರುದ್ಧ ಮಂಗಳೂರು ಪಾಲಿಕೆ ಸಭೆಯಲ್ಲಿ ವಿಪಕ್ಷ ದಲ್ಲಿರುವ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಸುಮಾರು ಒಂದುವರೆ ಘಂಟೆಗಳ ಕಾಲ ಪಾಲಿಕೆ ಸಭೆಯಲ್ಲಿ ಕಸಾಯಿಖಾನೆ ವಿಚಾರದ ಬಗ್ಗೆ ಚರ್ಚೆ ನಡೆದಿದ್ದು, ಈ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆಯಿತು.