Tuesday, November 19, 2024
ಸುದ್ದಿ

ಕಾಂಗ್ರೆಸ್‌ ಸರ್ಕಾರದ ಹಗರಣ ಖಂಡಿಸಿ ಬಿಜೆಪಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ : ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯದ ಪೊಲೀಸರು- ಕಹಳೆ ನ್ಯೂಸ್ – ಕಹಳೆ ನ್ಯೂಸ್

ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾಸಕ್ಕೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯುವ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿದ್ದ 187 ಕೋಟಿ ರೂಪಾಯಿಗಳನ್ನು ಬ್ರಹ್ಮಾಂಡ ಭ್ರಷ್ಟಾಚಾರ ಮೂಲಕ ನುಂಗಿ ನೀರು ಕುಡಿದು, ಈಗ ತನಿಖೆಯ ದಿಕ್ಕು ತಪ್ಪಿಸಿ ಪ್ರಕರಣವನ್ನೇ ಹಳ್ಳ ಹಿಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರು ಕೇಳಿ ವರ್ಷಗಳೇ ಉರುಳಿದ್ದರೂ ಹಗರಣಗಳ ಹೆಸರಂತೂ ದಿನನಿತ್ಯ ಕೇಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು