Tuesday, January 21, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ.

ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನದ ಡಿಸಿ ಮುಲೈ ಮುರುಗನ್ ಭೇಟಿ ನೀಡಿದ್ದಾರೆ. ಮಣ್ಣಿನಲ್ಲಿ ಸಿಲುಕಿರುವ ಕಾರ್ಮಿಕನ ರಕ್ಷಣೆಗಾಗಿ ಕಾರ್ಯಾಚರಣೆ ಚುರುಕುಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು