Tuesday, January 21, 2025
ಉಡುಪಿಸುದ್ದಿ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಡಾ. ಸುಧಾ ಕಾಮತ್ ರವರಿಗೆ ಬಿಸಿ ರಾಯ್ ಪುರಸ್ಕಾರ -ಕಹಳೆ ನ್ಯೂಸ್

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ ಕರುಣಾಕರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು