Wednesday, January 22, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಖ್ಯಮಂತ್ರಿ‌ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ : ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬೆಂಗಳೂರಿನಲ್ಲಿ ಸಿ ಎಂ‌ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

ಸುಮಾರು‌ ಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು. ಕಾಲೇಜು‌ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು