Saturday, September 21, 2024
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿಯವರ ಪುತ್ರರಾಗಿದ್ದಾರೆ ಸುಮಂತ್ ಎಸ್.ಅವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡುಮಾರ್ನಾಡು ಶಾಲೆಯ ವಿದ್ಯಾರ್ಥಿಯ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಮತ್ತು ಸಮಿತಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಡಾ. ರಾಜಶ್ರೀ ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು