Recent Posts

Monday, January 20, 2025
ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ಮುಂದೂಡಲಾಗಿದೆ.

ಹೌದು ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆಗೆ ಉಪಚುನಾವಣೆ ನೀತಿ ಸಂಹಿತೆ ಕಾರಣ ಎಂದು ಸರ್ಕಾರ ಸಮಜಾಯಿಷಿ ನೀಡಿದೆ. ಆದರೆ, ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ 2018 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ನಡೆಯಬೇಕಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಿನ್ನೆ ನಡೆದ ಪ್ರಶಸ್ತಿ ಆಯ್ಕೆ ಸಮಿತಿ ಪಟ್ಟಿಯನ್ನು ಅಂತಿಮಗೊಳಿಸಬೇಕಿತ್ತು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ ತೀರ್ಮಾನಕ್ಕೆ ಬರಲಾಗಿದೆ.