Friday, November 22, 2024
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ

ಶನಿವಾರವೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರು ನಗರದಲ್ಲಿ ಸಾಯಂಕಾಲದ ನಂತರ ಉತ್ತಮ ಮಳೆಯಾಗಿದೆ

ನದಿ, ಕೆರೆ, ಹಳ್ಳಗಳು ತುಂಬಿದ್ದು ಅಪಾಯ ಮಟ್ಟವನ್ನು ಮೀರುವ ಆತಂಕ ಎದುರಾಗಿದೆ. ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಡ್ಯಾಂಗಳು ಕೂಡಾ ಭರ್ತಿಯಾಗುತ್ತಿವೆ

ಇನ್ನು ಜುಲೈ 8 ರ ನಂತರ ಜುಲೈ 10ರವರೆಗೆ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮುಂದುವರೆಯಲಿದೆ. ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಹೊಂದಲಾಗಿದೆ