Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ – ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಪುತ್ತೂರು ಬನ್ನೂರು ಗ್ರಾಮದ ಮಹಮ್ಮದ್ ಸಫ್ವಾನ್ ಸೆರೆ – ಕಹಳೆ ನ್ಯೂಸ್

ಮಂಗಳೂರು :ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೈಕ್ ನಲ್ಲಿ ಮಾರಾಟ ಮಾಡಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ತಾಲೂಕು ಬನ್ನೂರು ಗ್ರಾಮ ಮಹಮ್ಮದ್ ಸಫ್ವಾನ್(32) ಬಂಧಿತ. ಆರೋಪಿಯಿಂದ ಬೈಕ್ ನ ಸೀಟಿನಲ್ಲಿಟ್ಟಿದ್ದ ರೂ. 90,000 ರೂ. ಮೌಲ್ಯದ 36 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಬೈಕ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,05,500 ರೂ ಎಂದು ಅಂದಾಜಿಸಲಾಗಿದೆ . ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ನಗರ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ -ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.