Recent Posts

Sunday, January 19, 2025
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್‌ ಪ್ರಿಂಟ್‌ ಮ್ಯಾಚ್‌ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್  ಹೋಲಿಕೆಯಾಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿ, ಮೃತನ‌ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್, ಆರೋಪಿಗಳ ಬಟ್ಟೆಗಳ ಮೇಲಿನ‌ ಫಿಂಗರ್ ಪ್ರಿಂಟ್ ಸಂಗ್ರಹ ಮಾಡಲಾಗಿತ್ತು.

ಎಫ್‌ಎಸ್‌ಎಲ್‌ ತಜ್ಞರನ್ನ ಬಳಸಿ ಫಿಂಗರ್ ಪ್ರಿಂಟ್ ಸಂಗ್ರಹಿಸಲಾಗಿತ್ತು. ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಪಡೆದು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ತನಿಖೆ ವೇಳೆ ಪೊಲೀಸರು ಪ್ರಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸದೇ ಇದ್ದರೆ ಆರೋಪಿಗಳು ಪ್ರಕರಣದಿಂದ ಖುಲಾಸೆ ಆಗುತ್ತಾರೆ. ಈ ಪ್ರಕರಣದಲ್ಲಿ ಫಿಂಗರ್‌ ಪ್ರಿಂಟ್‌ ಹೋಲಿಕೆಯಾಗಿದು ಕೋರ್ಟ್‌ ವಿಚಾರಣೆಯ ಸಂದರ್ಭದಲ್ಲಿ ಇದು ಪ್ರಮುಖ ಸಾಕ್ಷ್ಯವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು