Monday, January 20, 2025
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಮದರ್ ಥೆರೆಸಾ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ದಿಯಾ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು