Tuesday, January 21, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ – ಕಹಳೆ ನ್ಯೂಸ್

ಮಂಗಳೂರು : T 20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳೂರಿಗೆ ಬಂದು ಸುದ್ದಿಯಾಗಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಪತ್ನಿ ಸಮೇತರಾಗಿ ಮಂಗಳೂರಿಗೆ ಆಗಮಿಸಿದ್ದರು.

ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಮೂಲತ ಕರಾವಳಿಗರು ಆದ್ದರಿಂದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭ ಎಂಟನೇ ವಿವಾಹ ವಾರ್ಷಿಕೋತ್ಸವವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ‘ಪ್ರಣಾಮ್’ ತಂಡದವರು ದಂಪತಿ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು