Tuesday, January 21, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಯುವಕನ ಹುಚ್ಚಾಟ : ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ- ಕಹಳೆ ನ್ಯೂಸ್

ಮಂಗಳೂರು : ಪ್ರಸಿದ್ದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ ನಡೆಸಿದ ಘಟನೆ ವರದಿಯಾಗಿದ್ದು. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ದಾಖಲಿಸಿದ್ದಾರೆ.

ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ವೇಳೆ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿ ಹುಚ್ಚಾಟ ನಡೆಸಿದ್ದಾನೆ. ಅಲ್ಲದೆ ಬಳಿಕ ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಹುಚ್ಚಾಟ ನಡೆಸಿರೋ ಮಾಹಿತಿ ಇದೆ. ಈ ವೇಳೆ ಸ್ಥಳದಲ್ಲಿದ್ದವರು ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದು, ಯುವಕನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ. ರಂಪಾಟ ಮಾಡಿದ ಯುವಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಇದೆ.