Sunday, January 19, 2025
ಮೂಡಬಿದಿರೆಸುದ್ದಿ

ಮೂಡುಬಿದಿರೆ ತಾ.ಪಂ.ಸಾಮಾನ್ಯ ಸಭೆ ; ಡೆಂಗ್ಯೂ ಬಗ್ಗೆ ಎಚ್ಚರ, ಮಳೆಹಾನಿಗೆ ಮುಂಜಾಗೃತ ಕ್ರಮ ವಹಿಸಿಸಲು ಸೂಚನೆ –ಕಹಳೆ ನ್ಯೂಸ್

ಮೂಡುಬಿದಿರೆ: ಮಳೆಗಾಲದಲ್ಲಿ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಜಾಗೃತೆ ವಹಿಸುವಂತೆ ಜನರಿಗೆ ಮಾಹಿತಿ ನೀಡಿ, ಪ್ರಾಕೃತಿಕ ವಿಕೋಪದಿಂದ ಹಾನಿಗಳಾಗುವ ಮೊದಲೇ ಪರಿಹಾರ ಕಂಡುಕೊಳ್ಳಲು ಮುತುವರ್ಜಿ ವಹಿಸಿ ಹಾಗೂ ಜೀವಹಾನಿಯಾಗದಂತೆ ತಡೆಯುವಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಕೈ ಜೋಡಿಸುವಂತೆ ತಾಪಂ ಆಡಳಿತಾಧಿಕಾರಿ, ಮಂಗಳೂರು ಪಶು ಸಂಗೋಪನೆ ಮತ್ತು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಕರೆ ನೀಡಿದರು.

ಅವರು ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ಮಂಗಳವಾರ ಸಮಾಜ ಮಂದಿರದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೈದ್ಯಾಧಿಕಾರಿ ಶರತ್ ಅವರು ಮಾಹಿತಿ ನೀಡಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಈಗಾಗಲೇ 25 ಡೆಂಗ್ಯೂ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಮಾಹಿತಿ ಸಿಗುವಾಗ ತಡವಾಗುತ್ತಿದೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬಂದಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಈ ಬಗ್ಗೆ ಮನೆ ಮನೆಗೆ ತೆರಳಿ ರೋಗಗಳ ಬಗ್ಗೆ ಮಾಹಿತಿ ನೀಡುತ್ತಿರುವುದಲ್ಲ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಲೂಕಿನಲ್ಲಿ ಅನುಷ್ಠಾನ ಇಲಾಖೆಯವರು ನರೇಗಾವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಾಗಿದೆ. ಸರ್ಕಾರಿ ಹಾಸ್ಟೆಲ್‌ಗಳ ಪರಿಸ್ಥಿತಿ, ಗುಣಮಟ್ಟದ ಆಹಾರ ಪೂರೈಕೆಯ ಕುರಿತು ಅಧಿಕಾರಿಗಳು ಸೂಕ್ತ ಸಮಯದಲ್ಲಿ ಪರಿಶೀಲನೆ ನಡೆಸಬೇಕು. ತಾಲೂಕಿನ 6 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲದಿರುವುದರಿಂದ ಸರ್ಕಾರಿ ಜಾಗ, ಅನುದಾನ ಬಿಡುಗಡೆಗೆ ಪ್ರಯತ್ನಗಳಾಗಬೇಕಿದೆ. ಗೋಮಾಳ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಬೇಕು ಎಂದು ಉಪನಿರ್ದೇಶಕರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಅರಣ್ಯ ಇಲಾಖೆಯ ಸಹಕಾರದೊಂದಿಗೆ ಅಪಾಯಕಾರಿ ಮರಗಳನ್ನು ತೆರವು ಮಾಡಲಾಗುತ್ತಿದೆ. ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ತೆಗೆದು ಬೇರೆ ಕಂಬಗಳನ್ನು ಹಾಕಲಾಗಿದೆ ಅಲ್ಲದೆ ತಂತಿಗಳನ್ನು ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುತ್ತಿದ್ದೇವೆ.

ಮಳೆಗಾಲದಲ್ಲಿ ಕೆಲಸ ಮಾಡಲು 17 ಗ್ಯಾಂಗ್‌ಮ್ಯಾನ್ ಹಾಗೂ 1 ವಾಹನವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. 29 ಸಾವಿರ ಗ್ರಾಹಕರಲ್ಲಿ ಸುಮಾರು 28 ಸಾವಿರಪ ಗ್ರಾಹಕರು ಗೃಹಲಕ್ಷ್ಮೀ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ಮೆಸ್ಕಾಂನ ಸಹಾಯಕ ಕಾರ್ಯಕಾರಿ ಅಭಿಯಂತರ ಮೋಹನ್ ಕುಮಾರ್ ತಿಳಿಸಿದರು.

24 ಸಾವಿರ ಗಿಡಗಳನ್ನು ವಿತರಿಸಲಾಗಿದೆ ಎಂದು ಸಾಮಾಜಿಕ ಅರಣ್ಯ ಅಧಿಕಾರಿ ಆನಂದ್ ತಿಳಿಸಿದರು.
ಶಿಕ್ಷಕರಿಗೆ ಸಂಬಳ ನೀಡಲು ಹೆಚ್ಚುವರಿ ಅನುದಾನ, ಕೃಷಿ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ, ತಾಲೂಕಿನ ಅಭಿವೃದ್ಧಿ ಚಟುವಟಿಕೆಗಳ ಕುರಿತು ಚರ್ಚೆ ನಡೆಯಿತು.
ತಾಲೂಕು ಕಾರ್ಯಾನಿರ್ವಹಾಣಾಧಿಕಾರಿ ಲೋಕೇಶ್ ಬಿ. ಪ್ರೊಬೆಶನರಿ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ ಉಪಸ್ಥಿತರಿದ್ದರು.
ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಸಾಯೀಶ್ ಚೌಟ ಕಾರ್ಯಕ್ರಮ ನಿರೂಪಿಸಿದರು.