Tuesday, January 21, 2025
ಕಾಪುಶಿಕ್ಷಣಸುದ್ದಿ

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭಾ ಸದಸ್ಯರು ಆಂಗ್ಲ ಮಾಧ್ಯಮ ವಿಭಾಗದ ಕಾರ್ಯದರ್ಶಿಗಳಾದ ಕಿರಣ್ ಆಳ್ವ, ಕಾಪು ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಆಂಗ್ಲ ಮಾಧ್ಯಮ ಸಮಿತಿ ಅಧ್ಯಕ್ಷರಾದ ಪ್ರವೀಣ್ ಡಿ ಕುಂದರ್, ಕಾಪು ಬಿಲ್ಲವ ಸಹಕಾರಿ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ, ಪೊಲಿಪು ಮೋಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಪೊಲಿಪು ಹಳೆ ವಿದ್ಯಾರ್ಥಿ ಸಂಘ ಹಾಗೂ ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಕುಂದರ್, ಪೊಲಿಪು ಮೋಗವೀರ ಮಹಿಳಾ ಮಂಡಳಿ ಉಪಾಧ್ಯಕ್ಷರಾದ ಸುನಿತಾ ಚಂದ್ರಶೇಖರ್, ಪೊಲಿಪು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಧನಂಜಯ್ ಸಾಲ್ಯಾನ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಶಾಲಾ ಮುಖ್ಯೋಪಾಧ್ಯಾಯರಾದ ಗಾಯತ್ರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರ್ವ ಸದಸ್ಯರು, ಶಿಕ್ಷಕರು, ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು