Tuesday, January 21, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ.

ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆ. ಕೊಂಕಣ ರೈಲ್ವೆ ನಿಗಮ ಲಿಮಿಟೆಡ್ (ಕೆಆರ್‌ಸಿಎಲ್) ಸ್ವತಂತ್ರ ಸಂಸ್ಥೆಯಾಗಿ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು, ಇತರ ವಲಯಗಳಿಂದ ಮುಖ್ಯ ರೈಲ್ವೆ ಮೂಲಸೌಕರ್ಯಗಳ ಅವಲಂಬನೆಯನ್ನು ನಿವಾರಿಸಲು, ಈ ವಿಲೀನ ಅತೀ ಅವಶ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಅಗತ್ಯವಿದ್ದು, ಇದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಮತ್ತು ಪ್ರಯಾಣಿಕರ ಸಾಗಣೆ ಸುಗಮಗೊಳ್ಳುತ್ತದೆ. ಈ ನಡುವೆ, ಸುಬ್ರಹ್ಮಣ್ಯದಿಂದ ಸಕಲೇಶಪುರದ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಗಾಗಿ ಅಗತ್ಯ ಸೈಡಿಂಗ್ ಒದಗಿಸಲು ಕ್ರಮಗಳನ್ನು ಕೈಗೊಳ್ಳುವುದು.

ಉಳಿದಂತೆ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ.

ಜಿಲ್ಲೆಯ ಎಲ್ಲಾ ಶಾಸಕರು, Southern Railways, Southern Western Railways, Konkan Railway, Mangalore City Corporation, District Administration, PWD Department, Forest Department ಮತ್ತಿತರ ಸಂಬಂಧಿತ ಇಲಾಖೆಗಳನ್ನು ಒಟ್ಟು ಸೇರಿಸಿ ಮಂಗಳೂರಿನಲ್ಲಿ ಸಭೆಯನ್ನು ಮಾಡಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಮಾನ್ಯ ಸಚಿವರು ಉಪಸ್ಥಿತರಿರುವಂತೆ ವಿನಂತಿಸಿ ಅವರ ಸಮಯಕ್ಕಾಗಿ ಪತ್ರ ಬರೆಯಲಾಗಿದೆ.

ಈ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆಗೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿದೆ.