Sunday, January 26, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ/ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-2025- ಕಹಳೆ ನ್ಯೂಸ್

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹೆತ್ತವರ/ಪೋಷಕರ ಸಭೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮ ಜರುಗಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯಾರಾದ ಶ್ರೀ ಮಂಟ್ಯಯ್ಯರವರು ಜ್ಯೋತಿ ಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ಅಧ್ಯಕ್ಷರ ಸ್ಥಾನವನ್ನು ವಹಿಸಿಕೊಂಡು ಅಧ್ಯಕ್ಷತೆಯ ನೆಲೆಯಲ್ಲಿ ಪೋಷಕರ / ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕೆಂದು ಸಂಧರ್ಭೋಚಿತ ಮಾತುಗಳನ್ನಾಡಿದರು.

ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಜಾತರವರು ಮಕ್ಕಳು ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಬಹುದೆಂದು ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಶಾರದರವರು ಸಭೆಯಲ್ಲಿ ಉಪಸ್ಥಿತಿರಿದ್ದು ಶುಭ ಹಾರೈಸಿದರು. ಪ್ರತಿಭೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು , ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದರು . ನಿವೃತ್ತ ಕನ್ನಡ ಉಪನ್ಯಾಸಕಿ ಶ್ರೀಮತಿ ಸುಕನ್ಯ ದೇಲಂತಬೆಟ್ಟು ಇವರು ಕಾರ್ಯಕ್ರಮ ನಿರೂಪಿಸಿದರು, ಸಂಸ್ಥೆಯ ಎಲ್ಲಾ ಅಧ್ಯಾಪಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅಂದಗಾಣಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು