Saturday, January 25, 2025
ಕಾಪುಸುದ್ದಿ

13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸುಮತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪ್ರಕಾಶ್, ಬ್ರಹ್ಮಾವರ ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ದೂಪದಕಟ್ಟೆ ಸಿ.ಆರ್.ಪಿ ಶಾಂತಾ, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಹಾಗೂ ಗುತ್ತಿಗೆದಾರರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು