Saturday, January 25, 2025
ಕಾಪುಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ- ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ಬಂಧನ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ  ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಶೆಟ್ಟಿ ಹೆರ್ಗ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಮತ್ತು ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು